ADVERTISEMENT

ಗುಂಡಿನ ಚಕಮಕಿ: ಆರು ‍ಪೊಲೀಸರು ಹುತಾತ್ಮ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 11:17 IST
Last Updated 27 ಜೂನ್ 2022, 11:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮೆಕ್ಸಿಕೊ ಸಿಟಿ: ಉತ್ತರ ಮೆಕ್ಸಿಕೊದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಆರು ಪೊಲೀಸ್ ಅಧಿಕಾರಿಗಳು ಹುತಾತ್ಮರಾಗಿದ್ದು, ಹಲವು ದಾಳಿಕೋರರು ಹತರಾಗಿದ್ದಾರೆಎಂದು ನ್ಯೂವೊಲಿಯಾನ್ ರಾಜ್ಯದ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಆರು ಮಂದಿ ಪೊಲೀಸ್‌ ಅಧಿಕಾರಿಗಳು ವೀರಾವೇಶದಿಂದ ಹೋರಾಡಿ ಮಡಿದಿದ್ದಾರೆ.ಇತರ ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರ ಆಡಳಿತ ಹಿಂದೆಂದಿಗಿಂತ ಹೆಚ್ಚು ಹಿಂಸಾಚಾರ ಮತ್ತು ನರಹತ್ಯೆಗಳಿಗೆ ಸಾಕ್ಷಿಯಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಒಬ್ರಡಾರ್‌ ಆಡಳಿತ ಹರಸಾಹಸಪಡುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.