ADVERTISEMENT

ಪಾಕಿಸ್ತಾನ | ಚೆಕ್ ಪೋಸ್ಟ್ ಮೇಲೆ ಉಗ್ರರ ದಾಳಿ: 16 ಸೈನಿಕರು ಸಾವು

ಪಿಟಿಐ
Published 21 ಡಿಸೆಂಬರ್ 2024, 13:02 IST
Last Updated 21 ಡಿಸೆಂಬರ್ 2024, 13:02 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಪೇಶಾವರ: ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಅಫ್ಗಾನಿಸ್ತಾನದ ಗಡಿ ಸಮೀಪ ಉಗ್ರರು ನಡೆಸಿದ ದಾಳಿಯಲ್ಲಿ 16 ಯೋಧರು ಸಾವಿಗೀಡಾಗಿದ್ದು, ಇತರ ಎಂಟು ಮಂದಿ ಗಾಯಗೊಂಡಿದ್ದಾರೆ.

‘ಅಫ್ಗಾನಿಸ್ತಾನ ಗಡಿಗೆ ಹೊಂದಿಕೊಂಡಿರುವ ದಕ್ಷಿಣ ವಜೀರಿಸ್ತಾನ ಜಿಲ್ಲೆಯ ಮಕೀನ್‌ ಎಂಬಲ್ಲಿರುವ ಚೆಕ್‌ಪೋಸ್ಟ್‌ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ’ ಎಂದು ಭದ್ರತಾ ಪಡೆಯ ಮೂಲಗಳು ತಿಳಿಸಿವೆ. ಶನಿವಾರ ನಸುಕಿನ ವೇಳೆ ನಡೆದಿರುವ ಈ ಘಟನೆ, ಕಳೆದ ಕೆಲ ತಿಂಗಳುಗಳಲ್ಲಿ ಭದ್ರತಾ ಪಡೆಯನ್ನು ಗುರಿಯಾಗಿಸಿ ನಡೆದ ಅತಿದೊಡ್ಡ ದಾಳಿ ಎನಿಸಿದೆ.

ADVERTISEMENT

ತೆಹ್ರೀಕ್‌– ಎ– ಪಾಕಿಸ್ತಾನ (ಟಿಟಿಪಿ) ಸಂಘಟನೆಯು ದಾಳಿಯ ಹೊಣೆ ಹೊತ್ತುಕೊಂಡಿದೆ. ‘ದಾಳಿಯಲ್ಲಿ 35 ಸೈನಿಕರು ಬಲಿಯಾಗಿದ್ದು, 15 ಮಂದಿ ಗಾಯಗೊಂಡಿದ್ದಾರೆ’ ಎಂದು ಸಂಘಟನೆಯು ಹೇಳಿಕೊಂಡಿದೆ.

‘ಉಗ್ರರು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆಸಿದ್ದಾರೆ. ಅವರ ಪತ್ತೆಗೆ ವ್ಯಾಪಕ ಶೋಧ ನಡೆಸಲಾಗಿದೆ’ ಎಂದು ಪಾಕಿಸ್ತಾನ ಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.