ಅಪಘಾತ
–ಪ್ರಾತಿನಿಧಿಕ ಚಿತ್ರ
ಜೊಹಾನೆಸ್‌ಬರ್ಗ್: ದಕ್ಷಿಣ ಆಫ್ರಿಕಾದ ಲೂಯಿ ಟ್ರಿಚಾರ್ಟ್‌ನ ಬೆಟ್ಟಸಾಲಿನ ಪ್ರದೇಶದಲ್ಲಿ ನಿಯಂತ್ರಣ ತಪ್ಪಿದ ಬಸ್ ಕಟ್ಟೆಯೊಂದಕ್ಕೆ ಅಪ್ಪಳಿಸಿದ್ದು, 42 ಮಂದಿ ಮೃತಪಟ್ಟಿದ್ದಾರೆ.
ಅಪಘಾತವು ಭಾನುವಾರ ಸಂಭವಿಸಿದ್ದು, ಬಸ್ ದಕ್ಷಿಣ ಆಫ್ರಿಕಾದ ಈಸ್ಟರ್ನ್ ಕೇಪ್‌ನಿಂದ ದಕ್ಷಿಣದ ಕಡೆ ಸಾಗುತ್ತಿತ್ತು ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಮೃತಪಟ್ಟವರ ಮತ್ತು ಗಾಯಗೊಂಡವರ ಸಂಖ್ಯೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿರುವ ಪ್ರಾಂತೀಯ ಸರ್ಕಾರ, ಗಾಯಗೊಂಡವರ ಸಂಖ್ಯೆಯನ್ನು ತಿಳಿಸಿಲ್ಲ. ಆದರೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.