ADVERTISEMENT

ದಕ್ಷಿಣ ಆಫ್ರಿಕಾ: ಕಟ್ಟಡದಲ್ಲಿ ಬೆಂಕಿ ಅವಘಡ; 73 ಜನ ಸಾವು

ಎಎಫ್‌ಪಿ
Published 31 ಆಗಸ್ಟ್ 2023, 13:10 IST
Last Updated 31 ಆಗಸ್ಟ್ 2023, 13:10 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಜೊಹಾನಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಅತಿದೊಡ್ಡ ನಗರ ಜೋಹಾನ್ಸ್‌ಬರ್ಗ್​​ನಲ್ಲಿ ಗುರುವಾರ ಭೀಕರ ಅಗ್ನಿ ದುರಂತ ಸಂಭವಿಸಿದ್ದು ಘಟನೆಯಲ್ಲಿ ಕನಿಷ್ಠ 73 ಜನರು ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಐದು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದುವರೆಗೆ 73 ಮೃತದೇಹಗಳನ್ನು ಕಟ್ಟಡದ ಅವಶೇಷಗಳಿಂದ ಹೊರತೆಗೆಯಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ದಕ್ಷಿಣ ಆಫ್ರಿಕಾದ ಪೊಲೀಸರು ತಿಳಿಸಿದ್ದಾರೆ. 

ADVERTISEMENT

ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡ ಕೆಲವೇ ನಿಮಿಷಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಅಲ್ಲಿಗೆ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು. 43 ಜನರನ್ನು ಜೀವಂತವಾಗಿ ರಕ್ಷಣೆ ಮಾಡಿದರು ಎಂದು ಜೋಹಾನ್ಸ್‌ಬರ್ಗ್ ನಗರ ತುರ್ತು ಸೇವೆಗಳ ವಕ್ತಾರರು ತಿಳಿಸಿದ್ದಾರೆ.

ಈ ಕಟ್ಟಡದಲ್ಲಿ ಬಹುತೇಕ ಅಕ್ರಮ ವಲಸಿಗರೆ ನೆಲೆಸಿದ್ದಾರೆ. ಇಲ್ಲಿಗೆ ವಿದ್ಯುತ್​, ನೀರು ಸೇರಿ ಯಾವುದೇ ಮೂಲ ಸೌಕರ್ಯಗಳನ್ನು ನಗರಸಭೆ ನೀಡುತ್ತಿಲ್ಲ ಎಂದು ವಕ್ತಾರರು ಹೇಳಿದ್ದಾರೆ. 

ಕಟ್ಟಡದಲ್ಲಿ ವಾಸವಾಗಿರುವ ಬಹುಪಾಲು ಜನ ಬೆಳಕಿಗಾಗಿ ಮೇಣದಬತ್ತಿಗಳನ್ನು ಬಳಸುತ್ತಾರೆ. ಅಲ್ಲದೇ, ಸಣ್ಣ ಪ್ಯಾರಾಫಿನ್ ಸ್ಟೌವ್​ಗಳಲ್ಲಿ ಅಡುಗೆ ಮಾಡಿಕೊಳ್ಳುತ್ತಾರೆ. ಇಲ್ಲಿ ಚಿಕ್ಕ ಮಕ್ಕಳು ಸಹ ವಾಸವಾಗಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.