
ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದ ಬೆಕ್ಕರ್ಸ್ಡಾಲ್ ಪಟ್ಟಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನಾಗರಿಕರ ಮೇಲೆ ಗುಂಡಿನ ದಾಳಿ ಮಾಡಿದ್ದು, ಘಟನೆಯಲ್ಲಿ 10 ಜನರು ಮೃತಪಟ್ಟಿದ್ದಾರೆ. 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಜೋಹಾನ್ಸ್ ಬರ್ಗ್ ನಗರದಿಂದ 40 ಕಿ.ಮೀ ದೂರದಲ್ಲಿ ಬೆಕ್ಕರ್ಸ್ಡಾಲ್ ಪಟ್ಟಣವು ಚಿನ್ನದ ಗಣಿಗಾರಿಕೆಗೆ ಪ್ರಸಿದ್ಧವಾಗಿದೆ.
ಬೆಕ್ಕರ್ಸ್ಡಾಲ್ ಪಟ್ಟಣದ ಹೋಟೆಲೊಂದರ ಬಳಿ ಘಟನೆ ಜರುಗಿದ್ದು, ಅಪರಿಚಿತ ಬಂದೂಕುಧಾರಿ ವ್ಯಕ್ತಿಯೊಬ್ಬ ರಸ್ತೆಯಲ್ಲಿದ್ದ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯಲ್ಲಿ 10 ಜನರು ಮೃತಪಟ್ಟಿದ್ದು, ದಾಳಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಾಗರಿಕರ ಮೇಲೆ ನಡೆದ ಎರಡನೇ ಗುಂಡಿನ ದಾಳಿಯಾಗಿದೆ. ಡಿ.6ರಂದು ಪ್ರಿಟೋರಿಯಾದ ಹೋಟೆಲ್ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದ.
ಡಿ.14ರಂದು ಆಸ್ಟ್ರೇಲಿಯಾದ ಬೋಂಡಿ ಬೀಚ್‌ನಲ್ಲಿ ಕೂಡ ಗುಂಡಿನ ದಾಳಿ ನಡೆದಿತ್ತು. ಘಟನೆಯಲ್ಲಿ 15 ಜನರು ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.