ADVERTISEMENT

ದಕ್ಷಿಣ ಆಫ್ರಿಕಾ: ಜುಮಾ ಅರ್ಜಿ ವಿಚಾರಣೆಗೆ ಉನ್ನತ ನ್ಯಾಯಾಲಯ ಒಪ್ಪಿಗೆ

ಪಿಟಿಐ
Published 4 ಜುಲೈ 2021, 8:17 IST
Last Updated 4 ಜುಲೈ 2021, 8:17 IST
ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೊಬ್‌ ಝೂಮಾ
ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೊಬ್‌ ಝೂಮಾ   

ಜೋಹಾನ್ಸ್‌ಬರ್ಗ್: ಭಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರು ಹಾಜರಾದ ಕಾರಣ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೊಬ್ ಜುಮಾಗೆ ವಿಧಿಸಿರುವ 15 ತಿಂಗಳ ಜೈಲು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ದಕ್ಷಿಣ ಆಫ್ರಿಕಾದ ಉನ್ನತ ನ್ಯಾಯಾಲಯ ಒಪ್ಪಿಗೆ ನೀಡಿದ್ದು, ಅವರನ್ನು ಬಂಧಿಸುವುದಕ್ಕೂ ತಡೆ ನೀಡಿದೆ.

ತನ್ನ ಅಧಿಕಾರಾವಧಿಯಲ್ಲಿ ಭಷ್ಟ್ರಾಚಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಾಜಿ ಅಧ್ಯಕ್ಷ ಜಾಕೋಬ್‌ ಅವರ ವಿರುದ್ಧ ದೂರು ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ತನಿಖಾ ಆಯೋಗ ಹಲವು ಬಾರಿ ಸೂಚನೆ ನಿಡಿತ್ತು. ಆದರೆ, ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಆಯೋಗ ಮಂಗಳವಾರ ಜಾಕೋಬ್‌ ಅವರಿಗೆ 15 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಭಾನುವಾರದೊಳಗೆ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿತ್ತು.

ಜಾಕೋಬ್‌ ಅವರು ತನಗೆ ನೀಡಿರುವ ಶಿಕ್ಷೆಯ ತೀರ್ಪನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 12 ರಂದು ನಡೆಸುವುದಾಗಿ ನ್ಯಾಯಾಲಯವು ಶನಿವಾರ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.