ಜೆಜು ಏರ್ ವಿಮಾನಯಾನ ಸಂಸ್ಥೆಯ ವಿಮಾನ ಮುವಾನ್‌ನಲ್ಲಿ ಅಪಘಾತಕ್ಕೀಡಾಗಿರುವುದು
ರಾಯಿಟರ್ಸ್ ಚಿತ್ರ
ಸಿಯೋಲ್: ಮುವಾನ್‌ನಲ್ಲಿ ಅಪಘಾತಕ್ಕೀಡಾದ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿತ್ತು. ದುರಂತ ಸಂಭವಿಸುವುದಕ್ಕೆ ಕೆಲವೇ ಕ್ಷಣಗಳ ಮೊದಲು 'ಅಪಾಯದ' ಘೋಷಣೆ ಮಾಡಲಾಗಿತ್ತು ಎಂದು ಜೆಜು ಏರ್ ವಿಮಾನಯಾನ ಸಂಸ್ಥೆಯ ಜೆಟ್ ಪೈಲಟ್ ಹೇಳಿರುವುದಾಗಿ ಸಾರಿಗೆ ಸಚಿವಾಲಯ ಪ್ರಕಟಿಸಿದೆ.
ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನಿಂದ ಮುವಾನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನುವಾರ ಬೆಳಿಗ್ಗೆ ಬಂದ ವಿಮಾನವು, ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿತ್ತು. ರನ್‌ವೇನಿಂದ ಜಾರಿ ಕಾಂಕ್ರಿಟ್ ಗೋಡೆಗೆ ಡಿಕ್ಕಿಯಾಗಿ, ತಕ್ಷಣವೇ ಸ್ಫೋಟಗೊಂಡಿತ್ತು.
ವಿಮಾನದಲ್ಲಿ 6 ಮಂದಿ ಸಿಬ್ಬಂದಿ, 175 ಪ್ರಯಾಣಿಕರು ಇದ್ದರು. ಈ ಪೈಕಿ ಇಬ್ಬರಷ್ಟೇ ಬದುಕುಳಿದಿದ್ದಾರೆ.
ಈ ದುರಂತವು ದಕ್ಷಿಣ ಕೊರಿಯಾದಲ್ಲಿ ಸಂಭವಿಸಿದ ಅತ್ಯಂತ ಭೀಕರ ವಿಮಾನ ದುರಂತಗಳಲ್ಲಿ ಒಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.