ADVERTISEMENT

ದಕ್ಷಿಣ ಕೊರಿಯಾದಲ್ಲಿ ಸೇನಾಡಳಿತ ಜಾರಿ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2024, 15:35 IST
Last Updated 3 ಡಿಸೆಂಬರ್ 2024, 15:35 IST
ಯೂನ್‌ ಸುಕ್‌ ಯೋಲ್‌,  ದಕ್ಷಿಣ ಕೊರಿಯಾದ ಅಧ್ಯಕ್ಷ 
ಯೂನ್‌ ಸುಕ್‌ ಯೋಲ್‌,  ದಕ್ಷಿಣ ಕೊರಿಯಾದ ಅಧ್ಯಕ್ಷ    

ಸೋಲ್‌: ದೇಶದ ವಿರೋಧ ಪಕ್ಷಗಳು ಸಂಸತ್‌ ಅನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿವೆ ಎಂದು ಆರೋಪಿಸಿರುವ ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್‌ ಸುಕ್‌ ಯೋಲ್‌ ಅವರು ದೇಶದಲ್ಲಿ ಮಂಗಳವಾರದಿಂದಲೇ ‘ತುರ್ತು ಸೇನಾ ಆಡಳಿತ’ವನ್ನು ಜಾರಿಗೊಳಿಸಿದ್ದಾರೆ.

‌‘ದೇಶ ವಿರೋಧಿ ಕೃತ್ಯದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಉತ್ತರ ಕೊರಿಯಾ ಯತ್ನಿಸುತ್ತಿದೆ’ ಎಂದು ಈ ವೇಳೆ ಆರೋಪಿಸಿದ್ದಾರೆ.

‘ದೇಶದ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರ ಸ್ಥಿತಿ ತಲುಪಿರುವುದರಿಂದ ಸಾಂವಿಧಾನಿಕ ಆದೇಶವನ್ನು ಪ್ರಕಟಿಸಲಾಗಿದೆ’ ಎಂದು ದೇಶವನ್ನು ಉದ್ದೇಶಿಸಿ ಟೆಲಿವಿಷನ್‌ ಮೂಲಕ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.