ಕೇಪ್ ಕ್ಯಾನವೆರಲ್ (ಅಮೆರಿಕ): ಲಾಂಚ್ ಪ್ಯಾಡ್ ಸಮಸ್ಯೆಯಿಂದಾಗಿ ಬುಧವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಸ್ಪೇಸ್‌ಎಕ್ಸ್ ರಾಕೆಟ್ ಉಡ್ಡಯನ ವಿಳಂಬವಾಗಿದೆ.
ಹೀಗಾಗಿ, ಕಳೆದ ಒಂಬತ್ತು ತಿಂಗಳಿನಿಂದ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್‌ಎಸ್) ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ವಾಪಸ್ ಆಗುವುದು ವಿಳಂಬವಾಗಿದೆ.
ನಾಸಾ ಕಳುಹಿಸುತ್ತಿರುವ ಗಗನಯಾನಿಗಳು ಐಎಸ್‌ಎಸ್ ತಲುಪಿದ ನಂತರ, ಸುನಿತಾ ಹಾಗೂ ಬುಚ್ ಅವರು ಭೂಮಿಯತ್ತ ಪಯಣ ಆರಂಭಿಸಬೇಕಿದೆ. .
ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಬುಧವಾರ ಸಂಜೆ ಫಾಲ್ಕನ್ ರಾಕೆಟ್ ಉಡ್ಡಯನದ ನಿರ್ಣಾಯಕ ಹೈಡ್ರಾಲಿಕ್ ವ್ಯವಸ್ಥೆಯಲ್ಲಿ ದೋಷ ಕಾಣಿಸಿಕೊಂಡಿದೆ. ಹೀಗಾಗಿ ಉಡ್ಡಯನ ದಿನದಮಟ್ವಿಗೆ ಸ್ಗಿಿತಗೊಂಡಿದೆ.
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಲು ಸಿದ್ಧಗೊಂಡಿದ್ದ ನಾಲ್ವರು ಗಗನಯಾನಿಗಳು ಅಂತಿಮ ನಿರ್ಧಾರಕ್ಕಾಗಿ ಕಾಯುತ್ತಿದ್ದರು. ಆದರೆ, ಕೌಂಟ್‌ಡೌನ್‌ಗೆ ಒಂದು ಗಂಟೆ ಮೊದಲು ಉಡ್ಡಯನ ರದ್ದು ಮಾಡಲಾಗಿದೆ. ನಂತರ ಅಧಿಕಾರಿಗಳು ಕನಿಷ್ಠ ಶುಕ್ರವಾರದವರೆಗೆ ಉಡ್ಡಯನವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಜೂನ್‌ನಿಂದ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ವಿಲ್ಮೋರ್ ಮತ್ತು ವಿಲಿಯಮ್ಸ್ ಅವರನ್ನು ಅಮೆರಿಕ, ಜಪಾನ್ ಮತ್ತು ರಷ್ಯಾದ ಸಿಬ್ಬಂದಿ ಬದಲಾಯಿಸುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.