ADVERTISEMENT

ಕೊರೊನಾ ವೈರಸ್‌: ಸ್ಪೇನ್‌ನಲ್ಲಿ 9 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ಏಜೆನ್ಸೀಸ್
Published 1 ಏಪ್ರಿಲ್ 2020, 21:07 IST
Last Updated 1 ಏಪ್ರಿಲ್ 2020, 21:07 IST
   

ಮ್ಯಾಡ್ರಿಡ್‌: ಸ್ಪೇನ್‌ನಲ್ಲಿ ಒಂದೇ ದಿನ ಕೊರೊನಾ ಸೋಂಕಿನಿಂದ 864 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 9 ಸಾವಿರಕ್ಕೆ ಏರಿಕೆಯಾಗಿದೆ.

ಸೋಂಕು ದೃಢಪಟ್ಟವರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ ಎಂದು ಸರ್ಕಾರ ತಿಳಿಸಿದೆ.ಇಟಲಿ ನಂತರ ಸ್ಪೇನ್‌ನಲ್ಲೇ ಅತಿ ಹೆಚ್ಚು ಜನ ಕೊರೊನಾ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆ.

9,053 ಮಂದಿ ಈಗಾಗಲೇ ಸೋಂಕಿನಿಂದ ಮೃತಪಟ್ಟಿದ್ದು, 1,02, 136 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.