(ಪ್ರಾತಿನಿಧಿಕ ಚಿತ್ರ(
ಕೊಲಂಬೊ: ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 12 ಭಾರತೀಯ ಮೀನುಗಾರರನ್ನು ಅಲ್ಲಿನ ನೌಕಾಪಡೆ ಬಂಧಿಸಿದೆ ಎಂದು ಭಾನುವಾರ ಅಧಿಕೃತ ಹೇಳಿಕೆ ತಿಳಿಸಿದೆ.
ಶನಿವಾರ ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಲಾಗಿದ್ದು, ಅವರ ಮೂರು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೌಕಾಪಡೆ ಪ್ರಕಟಣೆಯಲ್ಲಿ ತಿಳಿಸಿದೆ. ಮುಂದಿನ ಕ್ರಮಕ್ಕಾಗಿ ಅವರನ್ನು ಕಂಕಸಂತುರೈ ಬಂದರಿಗೆ ಕರೆದೊಯ್ಯಲಾಗಿದೆ ಎಂದು ಅದು ಹೇಳಿದೆ.
ಮೀನುಗಾರರ ಸಮಸ್ಯೆ ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯಕ್ಕೆ ಧಕ್ಕೆ ಉಂಟುಮಾಡುತ್ತಿದೆ. ಅಂತರರಾಷ್ಟ್ರೀಯ ಸಮುದ್ರ ಗಡಿ ರೇಖೆಯನ್ನು ದಾಟಿ ಶ್ರೀಲಂಕಾದ ಜಲ ಪ್ರದೇಶದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಶ್ರೀಲಂಕಾ ಅಧಿಕಾರಿಗಳು ಭಾರತೀಯ ಮೀನುಗಾರರನ್ನು ಬಂಧಿಸಿದ ಹಲವು ನಿದರ್ಶನಗಳಿವೆ.
2023ರಲ್ಲಿ ಶ್ರೀಲಂಕಾ ನೌಕಾಪಡೆ, 240 ಭಾರತೀಯ ಮೀನುಗಾರರನ್ನು ಬಂಧಿಸಿದ್ದು, ಅವರಿಂದ ಸುಮಾರು 35 ದೋಣಿಗಳನ್ನು ವಶಪಡಿಸಿಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.