ಕೊಲಂಬೊ: ಭ್ರಷ್ಟಾಚಾರ ಆರೋಪದಡಿ ಬಂಧನದಲ್ಲಿದ್ದ ಶ್ರೀಲಂಕಾದ ಮಾಜಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರಿಗೆ ಕೊಲಂಬೊ ಪೋರ್ಟ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಕೊಲಂಬೊ ನ್ಯಾಷನಲ್ ಆಸ್ಪತ್ರೆಯ ತೀವ್ರ ನೀಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾನಿಲ್ ಅವರು ವರ್ಚುವಲ್ ಆಗಿ ವಿಚಾರಣೆಗೆ ಹಾಜರಾದರು.
ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಡಿ ರಾನಿಲ್ ಅವರನ್ನು ಸಿಐಡಿ ಶುಕ್ರವಾರ ಬಂಧಿಸಿತ್ತು. ಅವರ ಜಾಮೀನು ಅರ್ಜಿ ತಿರಸ್ಕೃರಿಸಿದ್ದ ನ್ಯಾಯಾಲಯ ಮಂಗಳವಾರದವರಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಗ್ಯದಲ್ಲಿ ಏರುಪೇರಾದ ಕಾರಣ ಭಾನುವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದ ಕಾರಣ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.