ADVERTISEMENT

ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಶ್ರೀಲಂಕಾ ತೊರೆಯುವಂತಿಲ್ಲ: ನ್ಯಾಯಾಲಯದ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 13 ಮೇ 2022, 2:49 IST
Last Updated 13 ಮೇ 2022, 2:49 IST
   

ಕೊಲಂಬೊ:ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಇತ್ತೀಚೆಗಷ್ಟೇ ಸರ್ಕಾರಿ ವಿರೋಧಿ ಪ್ರತಿಭಟನಕಾರರ ಮೇಲೆ ನಡೆದ ದಾಳಿಗಳ ಹಿನ್ನೆಲೆಯಲ್ಲಿ ತನಿಖೆ ಎದುರಿಸುತ್ತಿರುವ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ, ಅವರ ಪುತ್ರ ನಮಲ್ ರಾಜಪಕ್ಸ ಹಾಗೂ ಇತರ 15 ಮಂದಿ ದೇಶಬಿಟ್ಟು ಹೋಗದಂತೆ ಸ್ಥಳೀಯ ನ್ಯಾಯಾಲಯವೊಂದು ನಿರ್ಬಂಧ ಹೇರಿದೆ.

‘ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ದಾಳಿ ನಡೆಸಿದ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಘಟನೆಗೆ ಮಹಿಂದಾ ರಾಜಪಕ್ಸ ಸೇರಿದಂತೆ 17 ಮಂದಿ ಸಂಚು ರೂಪಿಸಿ, ಈ ದಾಳಿಗಳನ್ನು ಯೋಜಿಸಿದಂತೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಮಹಿಂದಾ ರಾಜಪಕ್ಸ ಸೇರಿದಂತೆ 17 ಮಂದಿ ಹೊರದೇಶಗಳಿಗೆ ಪ್ರಯಾಣಿಸದಂತೆ ನಿರ್ಬಂಧ ಹೇರಬೇಕು’ ಎಂದು ಅಟಾರ್ನಿ ಜನರಲ್ ಕೋರಿದ್ದರು.

ಈ ಹಿನ್ನೆಲೆಯಲ್ಲಿ ಫೋರ್ಟ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು, ಈ ನಿರ್ಬಂಧ ಹೇರಿದೆ ಎಂದು ವರದಿಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.