ರಾನಿಲ್ ವಿಕ್ರಮ್‌ಸಿಂಘೆ
ರಾಯಿಟರ್ಸ್ ಚಿತ್ರ
ಕೊಲಂಬೊ: ಸರ್ಕಾರದ ನಿಧಿಯನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಅಧ್ಯಕ್ಷ ರಾನಿಲ್ ವಿಕ್ರಮ್‌ಸಿಂಘೆ ಅವರನ್ನು ಅಪರಾಧ ತನಿಖಾ ವಿಭಾಗ (ಸಿಐಡಿ) ಬಂಧಿಸಿದೆ.
2023ರ ಸೆಪ್ಟೆಂಬರ್‌ನಲ್ಲಿ ವಿಕ್ರಮ್‌ಸಿಂಘೆ ಅವರು ಇಂಗ್ಲೆಂಡ್‌ಗೆ ಪ್ರಯಾಣಿಸಲು ಸಾರ್ವಜನಿಕ ನಿಧಿಯ ಹಣವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.
ಸಿಂಘೆ ಅವರು ಅಮೆರಿಕದಲ್ಲಿ ಅಧಿಕೃತವಾಗಿ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದರು. ಅಲ್ಲಿಂದ ಬಂದ ಬಳಿಕ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂಗ್ಲೆಂಡ್‌ಗೆ ತೆರಳಿದ್ದರು. ತಮ್ಮ ಈ ಪ್ರವಾಸಕ್ಕೆ ಸಾರ್ವಜನಿಕ ನಿಧಿಗಾಗಿ ಮೀಸಲಿಟ್ಟಿದ್ದ ಸರ್ಕಾರದ ಹಣವನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಸಿಂಘೆ, 2022ರ ಜುಲೈನಿಂದ 2024ರ ಸೆಪ್ಟೆಂಬರ್ ವರೆಗೆ ಶ್ರೀಲಂಕಾದ ಅಧ್ಯಕ್ಷರಾಗಿದ್ದರು. ದೇಶದ ಆರ್ಥಿಕ ಪರಿಸ್ಥಿತಿಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಿಂದಾಗಿ ಗೊಟಬಯಾ ರಾಜಪಕ್ಸೆ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದರು. ಹೀಗಾಗಿ ಉಳಿದ ಅವಧಿಯನ್ನು ಪೂರೈಸಲು ಸಿಂಘೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿತ್ತು.
ಸಿಂಘೆ ಅವರು ಆರು ಬಾರಿ ಶ್ರೀಲಂಕಾದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.