ADVERTISEMENT

ರಕ್ತದೊತ್ತಡ: ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಆಸ್ಪತ್ರೆಗೆ ದಾಖಲು

ಪಿಟಿಐ
Published 23 ಆಗಸ್ಟ್ 2025, 14:27 IST
Last Updated 23 ಆಗಸ್ಟ್ 2025, 14:27 IST
ರನಿಲ್‌ ವಿಕ್ರಮಸಿಂಘೆ
ರನಿಲ್‌ ವಿಕ್ರಮಸಿಂಘೆ   

ಕೊಲಂಬೊ: ಭ್ರಷ್ಟಾಚಾರ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ (76) ಅವರನ್ನು ಶನಿವಾರ ಕಾರಾಗೃಹದ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ರನಿಲ್‌ ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ರಕ್ತದಲ್ಲಿ ಸಕ್ಕರೆಯ ಅಂಶ ಹೆಚ್ಚಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜೈಲು ವಕ್ತಾರ ತಿಳಿಸಿದ್ದಾರೆ. 

ಕೊಲಂಬೊ ಫೋರ್ಟ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ರನಿಲ್‌ ಅವರಿಗೆ ಜಾಮೀನು ನೀಡಲು ನಿರಾಕರಿಸಿ, ಅವರಿಗೆ ಆಗಸ್ಟ್‌ 26ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಹೀಗಾಗಿ, ಶುಕ್ರವಾರ ಮಧ್ಯರಾತ್ರಿಯೇ ಅವರನ್ನು ಜೈಲಿಗೆ ಕರೆದೊಯ್ಯಲಾಗಿತ್ತು . 

ADVERTISEMENT

ತಮ್ಮ ಅಧಿಕಾರವಧಿಯಲ್ಲಿ ಬೊಕ್ಕಸದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದಲ್ಲಿ ಸಿಂಘೆ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.