ಕೊಲಂಬೊ: ಕೇರಳದ ಶಬರಿಮಲೆ ಯಾತ್ರೆಗೆ ಮಾನ್ಯತೆ ನೀಡಲು ಶ್ರೀಲಂಕಾ ಸರ್ಕಾರ ನಿರ್ಧರಿಸಿದೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರತಿವರ್ಷ ನವೆಂಬರ್‌ನಿಂದ ಜನವರಿ ಅವಧಿಯಲ್ಲಿ ಸುಮಾರು 15000 ಮಂದಿ ಶ್ರೀಲಂಕಾ ಪ್ರಜೆಗಳು ಭಾರತದ ಕೇರಳದಲ್ಲಿರುವ ಶಬರಿಮಲೆಗೆ ಯಾತ್ರೆ ಕೈಗೊಂಡು, ಅಯ್ಯಪ್ಪನ ದರ್ಶನ ಪಡೆಯುತ್ತಿದ್ದಾರೆ. ಈ ಕಾರಣ ಶಬರಿಮಲೆ ಯಾತ್ರೆಗೆ ಧಾರ್ಮಿಕ ಯಾತ್ರೆಯ ಮಾನ್ಯತೆ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.