ADVERTISEMENT

ಶ್ರೀಲಂಕಾ: ದಿನಕ್ಕೆ 10 ಗಂಟೆ ವಿದ್ಯುತ್ ಪೂರೈಕೆ ಸ್ಥಗಿತ

ಪಿಟಿಐ
Published 30 ಮಾರ್ಚ್ 2022, 11:38 IST
Last Updated 30 ಮಾರ್ಚ್ 2022, 11:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಲಂಬೊ: ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಶ್ರೀಲಂಕಾ ಸರ್ಕಾರ ದೇಶದಾದ್ಯಂತ ದಿನಕ್ಕೆ 7-10 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸುವ ಕ್ರಮವನ್ನು ಮತ್ತಷ್ಟು ದಿನಗಳ ಕಾಲ ವಿಸ್ತರಣೆ ಮಾಡಿದೆ. ಇದರಿಂದಾಗಿ ಜನ ಸಾಮಾನ್ಯರು ರಾತ್ರಿ ವೇಳೆಮತ್ತಷ್ಟು ಕಾಲ ಕತ್ತಲಲ್ಲೇ ಕಾಲ ಕಳೆಯುವ ಅನಿವಾರ್ಯತೆ ಎದುರಾಗಿದೆ.

ಜಲಜನಕ ವಿದ್ಯುತ್ ಉತ್ಪಾದನೆಗೆ ಅಗತ್ಯವಿರುವ ಇಂಧನದ ಅಲಭ್ಯತೆಯಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.ಕಳೆದೊಂದು ತಿಂಗಳಿನಿಂದ ಲಂಕಾದಲ್ಲಿ ದಿನಕ್ಕೆ 7 ಗಂಟೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ.

ತೀವ್ರ ವಿದೇಶಿ ವಿನಿಮಯ ಕೊರತೆಯ ಪರಿಣಾಮ ಶ್ರೀಲಂಕಾ ಸರ್ಕಾರ ಆರ್ಥಿಕ ಮತ್ತು ಇಂಧನ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇಂಧನದ ಕೊರತೆಯಿಂದ ಜನರು ಪೆಟ್ರೋಲ್ ಪಂಪ್ ಮತ್ತು ಸೀಮೆಎಣ್ಣೆ ಕೇಂದ್ರಗಳ ಮುಂದೆ ಸರತಿ ಸಾಲಿನಲ್ಲಿ ಕೂತಿದ್ದಾರೆ. ಪೆಟ್ರೋಲ್ ಪಂಪ್‌ಗಳು ಮತ್ತು ಸೀಮೆಎಣ್ಣೆ ಕೇಂದ್ರಗಳಿಗೆ ಲಂಕಾ ಸರ್ಕಾರ ಸೇನಾ ಭದ್ರತೆಯನ್ನು ಒದಗಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.