ಕೊಲಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಪ್ರತಿಭಟನೆಗಳು ಮುಂದುವರಿದಿವೆ.
ಇದೇ ವೇಳೆ, ಕೊಲಂಬೊದಲ್ಲಿರುವ ಶ್ರೀಲಂಕಾದ ಮಾಜಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ನಿವಾಸದ ಆವರಣದಲ್ಲಿ ಅಡುಗೆ ತಯಾರಿಸಲು ಪ್ರತಿಭಟನಾಕಾರರು ಆರಂಭಿಸಿದ್ದಾರೆ.
‘ನಾವು ಪ್ರತಿಭಟನಾಕಾರರು ಅಡುಗೆ ಮಾಡಲು ಪ್ರಾರಂಭಿಸಿದ್ದೇವೆ. ನಾವೀಗ ಪ್ರಧಾನಿ ಮನೆಯೊಳಗಿದ್ದೇವೆ. ಪ್ರಧಾನಿ ವಿಕ್ರಮಸಿಂಘೆ ಮತ್ತು ಅಧ್ಯಕ್ಷ ರಾಜಪಕ್ಸೆ ತೊಲಗುವವರೆಗೂ ನಾವು ಹೋರಾಟ ನಡೆಸುತ್ತೇವೆ. ಅವರು ರಾಜೀನಾಮೆ ನೀಡಿದಾಗ ಮಾತ್ರ ನಾವು ಆವರಣವನ್ನು ತೊರೆಯುತ್ತೇವೆ’ ಎಂದು ಪ್ರತಿಭಟನಾಕಾರರೊಬ್ಬರು ಸುದ್ದಿಸಂಸ್ಥೆ ‘ಎಎನ್‌ಐ’ ಗೆ ತಿಳಿಸಿದ್ದಾರೆ.
ರಾನಿಲ್ ವಿಕ್ರಮಸಿಂಘೆ ಅವರು ಶನಿವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.