ಕೊಲಂಬೊ: ಆಕ್ರೋಶಭರಿತ ನಾಗರಿಕರ ಪ್ರತಿಭಟನೆಗೆ ಅಂಜಿ ಮಾಲ್ಡೀವ್ಸ್‌ಗೆ ಪರಾರಿಯಾಗಿರುವ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ಇಂದು ರಾತ್ರಿ ಸಿಂಗಪುರಕ್ಕೆ ಹಾರಲಿದ್ದಾರೆ. ಈ ಕುರಿತು ಶ್ರೀಲಂಕಾದ ‘ಡೈಲಿ ಮಿರರ್’ ಪತ್ರಿಕೆ ವರದಿ ಮಾಡಿದೆ.
ಮೂಲಗಳ ಪ್ರಕಾರ, ಗೊಟಬಯ ರಾಜಪಕ್ಸ ಇಂದು(ಬುಧವಾರ) ಬೆಳಿಗ್ಗೆಮಾಲ್ಡೀವ್ಸ್‌ಗೆ ಪಲಾಯನಗೈದಿದ್ದಾರೆ. ಇದರ ಬೆನ್ನಲ್ಲೇ ಲಂಕಾದಲ್ಲಿನ ಪ್ರತಿಭಟನೆಗಳು ತೀವ್ರಗೊಂಡಿವೆ. ಅಧ್ಯಕ್ಷ ಸ್ಥಾನಕ್ಕೆ ಗೊಟಬಯ ರಾಜೀನಾಮೆಯನ್ನು ನೀಡಲೇಬೇಕೆಂದು ನಾಗರಿಕರು ಒತ್ತಾಯಿಸುತ್ತಿದ್ದಾರೆ.
ಸದ್ಯ ಮಾಲ್ಡೀವ್ಸ್‌ನಲ್ಲಿ ಇರುವ ಗೊಟಬಯ ಇಂದು ರಾತ್ರಿ ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ.
ಗೊಟಬಯ ಅವರು ಅಧ್ಯಕ್ಷ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಲಿದ್ದಾರೆಂದು ಶ್ರೀಲಂಕಾ ಸಂಸತ್ತಿನ ಸ್ವೀಕರ್ ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ, ಶ್ರೀಲಂಕಾದ ಹಂಗಾಮಿ ಅಧ್ಯಕ್ಷರನ್ನಾಗಿ ರಾನಿಲ್ ರಾನಿಲ್ ವಿಕ್ರಮಸಿಂಘೆ ಅವರನ್ನು ನೇಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.