ADVERTISEMENT

ಶ್ರೀಲಂಕಾ: ಕರ್ಫ್ಯೂ ಧಿಕ್ಕರಿಸಿ ಪೊಲೀಸರೊಂದಿಗೆ ಸಂಘರ್ಷಕ್ಕಿಳಿದ ವಿದ್ಯಾರ್ಥಿಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಏಪ್ರಿಲ್ 2022, 13:15 IST
Last Updated 3 ಏಪ್ರಿಲ್ 2022, 13:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಲಂಬೊ: ಶ್ರೀಲಂಕಾದಲ್ಲಿ ಹದಗೆಡುತ್ತಿರುವ ಆರ್ಥಿಕ ಪರಿಸ್ಥಿತಿಯ ವಿರುದ್ಧ ಪ್ರತಿಭಟಿಸಲು ಸಾವಿರಾರು ವಿದ್ಯಾರ್ಥಿಗಳು ವಾರಾಂತ್ಯದ ಕರ್ಫ್ಯೂವನ್ನು ಧಿಕ್ಕರಿಸಿದ್ದಾರೆ.

ಸರ್ಕಾರ ವಿಧಿಸಿರುವ ವಾರಾಂತ್ಯದ ಕರ್ಫ್ಯೂ ಅನ್ನು ಧಿಕ್ಕರಿಸುವ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಹಾಗೂ ಜಲ ಫಿರಂಗಿಗಳನ್ನು ಬಳಸಿದ್ದಾರೆ.

ರಾಜಧಾನಿ ಕೊಲಂಬೊದಲ್ಲಿ ನಡೆಯುತ್ತಿರುವ ವಿರೋಧ ಪಕ್ಷದ ಮೆರವಣಿಗೆಯಲ್ಲಿಯೂ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.

ADVERTISEMENT

ಪ್ರತಿಭಟನಾಕಾರರನ್ನು ತಡೆಯಲು ಸೈನಿಕರು ಮತ್ತು ಪೊಲೀಸರು ಅಶ್ರುವಾಯುವನ್ನು ಸಿಡಿಸಿದ್ದಾರೆ.

ವಿದ್ಯುತ್ ಕಡಿತದ ಜೊತೆಗೆ ದೇಶವು ಆಹಾರ, ಇಂಧನ ಮತ್ತು ಇತರ ಅಗತ್ಯ ವಸ್ತುಗಳ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ಇದರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ಅಧಿಕಾರಿಗಳು ವಾರಾಂತ್ಯದಲ್ಲಿ ಕರ್ಫ್ಯೂ ವಿಧಿಸಿದ್ದಾರೆ.

ಶ್ರೀಲಂಕಾದಾದ್ಯಂತ ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲಾಗಿದೆ. ಟ್ವಿಟರ್, ಫೇಸ್‌ಬುಕ್, ವಾಟ್ಸ್‌ಆ್ಯಪ್, ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಂ ಸೇರಿದಂತೆ ಎಲ್ಲಾ ವೇದಿಕೆಗಳ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ' ಎಂದು ಲಂಡನ್ ಮೂಲದ ನೆಟ್‌ಬ್ಲಾಕ್ಸ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.