ADVERTISEMENT

ಗ್ರೀಸ್‌ನ ದಕ್ಷಿಣ ದ್ವೀಪದಲ್ಲಿ ಪ್ರಬಲ ಭೂಕಂಪ

ಏಜೆನ್ಸೀಸ್
Published 27 ಸೆಪ್ಟೆಂಬರ್ 2021, 10:41 IST
Last Updated 27 ಸೆಪ್ಟೆಂಬರ್ 2021, 10:41 IST
ಕ್ರೀಟ್‌ ದ್ವೀಪದಲ್ಲಿ ಸಂಭವಿಸಿದ ಭೂಕಂಪನದಲ್ಲಿ ಸಾವಿಗೀಡಾದ ವ್ಯಕ್ತಿಯ ಮೃತದೇಹವನ್ನು ರಕ್ಷಣಾ ಸಿಬ್ಬಂದಿ ಕಟ್ಟಡದ ಅವಶೇಷಗಳಡಿಯಿಂದ ಹೊರತೆಗೆದರು            –ಎಎಫ್‌‍ಪಿ ಚಿತ್ರ
ಕ್ರೀಟ್‌ ದ್ವೀಪದಲ್ಲಿ ಸಂಭವಿಸಿದ ಭೂಕಂಪನದಲ್ಲಿ ಸಾವಿಗೀಡಾದ ವ್ಯಕ್ತಿಯ ಮೃತದೇಹವನ್ನು ರಕ್ಷಣಾ ಸಿಬ್ಬಂದಿ ಕಟ್ಟಡದ ಅವಶೇಷಗಳಡಿಯಿಂದ ಹೊರತೆಗೆದರು            –ಎಎಫ್‌‍ಪಿ ಚಿತ್ರ   

ಅಥೆನ್ಸ್‌: ‘ಗ್ರೀಸ್‌ನ ದಕ್ಷಿಣ ಭಾಗದ ದ್ವೀಪವಾದ ಕ್ರೀಟ್‌ನಲ್ಲಿ ಸೋಮವಾರ 5.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಈ ಪ್ರದೇಶದಲ್ಲಿ ಭೂಕಂಪದ ಬಳಿಕ ಸುಮಾರು 9 ಬಾರಿ ಲಘು ಕಂಪನಗಳು ಆಗಿವೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಂದ ವಿದ್ಯಾರ್ಥಿಗಳು, ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು. ಕೇಂದ್ರ ಬಿಂದು ಪತ್ತೆಯಾದ ಸ್ಥಳದ ಸಮೀಪವಿರುವ ಗ್ರಾಮಗಳು ಹಾನಿಗೊಳಗಾಗಿವೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT