ಕಠ್ಮಂಡು: ನೇಪಾಳದ ಮಧ್ಯ ಭಾಗ ಸೇರಿ ರಾಜಧಾನಿ ಕಠ್ಮಂಡುವಿನಲ್ಲಿ 7.1 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಮಂಗಳವಾರ ಬೆಳಿಗ್ಗೆ 6.50ರ ಸುಮಾರಿಗೆ ಭೂಕಂಪ ಸಂಭವಿಸಿದೆ.
ಭೂಕಂಪದ ಕೇಂದ್ರಬಿಂದುವು ನೇಪಾಳದ ಲೋಬುಚೆ ಪ್ರದೇಶದಿಂದ 93 ಕಿಲೋಮೀಟರ್ ದೂರದಲ್ಲಿದೆ ಎಂದು ಭೂವೈಜ್ಞಾನಿಕ ಸಮೀಕ್ಷೆ ಹೇಳಿದೆ.
ಭೂಮಿ ಕಂಪಿಸಿದ ಪರಿಣಾಮ ಕಠ್ಮಂಡುವಿನಲ್ಲಿ ಕಟ್ಟಡಗಳು ನಡುಗಿದವು. ಇದರಿಂದ ಭಯಗೊಂಡ ಜನರು ಮನೆಯಿಂದ ಹೊರಬಂದಿದ್ದಾರೆ. ಆಸ್ತಿ ಅಥವಾ ಜೀವ ಹಾನಿ ಸಂಭವಿಸಿದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.