ಅಥೆನ್ಸ್: ಕೇಂದ್ರ ಗ್ರೀಸ್‌ನಲ್ಲಿ ಬುಧವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಸಾವು–ನೋವು ಉಂಟಾದ ವರದಿಯಾಗಿಲ್ಲ.
ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.2 ಎಂದು ದಾಖಲಾಗಿದೆ. ಲಾರಿಸ್ಸಾ ಪಟ್ಟಣದಿಂದ 22 ಕಿ.ಮೀ. ದೂರದಲ್ಲಿ ಭೂಕಂಪದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ 12.15ರ ವೇಳೆಗೆ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಸೆಸ್ಮೋಲಾಜಿಕಲ್ ಕೇಂದ್ರವು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.