ಸಾವು
ಪ್ರಾತಿನಿಧಿಕ ಚಿತ್ರ
ಒಟ್ಟಾವ(ಕೆನಡಾ): ಕೆನಡಾದ ಮನಿಟೊಬಾ ಪ್ರದೇಶದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಭಾರತ ಮೂಲದ ತರಬೇತಿ ನಿರತ ಪೈಲಟ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಟೊರೆಂಟೊದ ಭಾರತದ ರಾಯಭಾರ ಕಚೇರಿ ತಿಳಿಸಿದೆ.
ಮೃತ ಪೈಲಟ್ ಅನ್ನು ಶ್ರೀಹರಿ ಸುಕೇಶ್ ಎಂದು ಗುರುತಿಸಲಾಗಿದ್ದು, ಶ್ರೀಹರಿ ಹಾರಿಸುತ್ತಿದ್ದ ಸಿಂಗಲ್ ಎಂಜಿನ್ ವಿಮಾನಕ್ಕೆ ಕೆನಡಾದ ಯುವಕನೊಬ್ಬ ಚಲಾಯಿಸುತ್ತಿದ್ದ ಅದೇ ಮಾದರಿಯ ಮತ್ತೊಂದು ವಿಮಾನವು ಆಕಾಶದಲ್ಲಿ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.
ದುಃಖಿತ ಕುಟುಂಬ, ಪೈಲಟ್ ತರಬೇತಿ ಶಾಲೆ ಮತ್ತು ಸ್ಥಳೀಯ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲಾಗಿದೆ ಎಂದು ಬುಧವಾರ ಭಾರತದ ಕಾನ್ಸುಲೇಟ್ ಜನರಲ್ ಹೇಳಿದ್ದಾರೆ.
ಇಬ್ಬರೂ ತರಬೇತಿ ನಿರತ ಪೈಲಟ್‌ಗಳು ಟೇಕ್‌ಆಫ್ ಮತ್ತು ಲ್ಯಾಂಡಿಂಗ್ ಅಭ್ಯಾಸ ಮಾಡುತ್ತಿದ್ದರು. ಲ್ಯಾಂಡಿಂಗ್ ಸ್ಟ್ರಿಪ್ ಸಮೀಪಿಸುತ್ತಿದ್ದಾಗ ವಿಮಾನಗಳು ಡಿಕ್ಕಿ ಆಗಿವೆ ಎಂದು ಸಿಬಿಸಿ ವರದಿ ತಿಳಿಸಿದೆ.
ಈ ಭೀಕರ ದುರಂತದ ಸಂಬಂಧ ಮಾಹಿತಿ ಕಲೆ ಹಾಕುತ್ತಿದ್ದು, ತನಿಖೆ ನಡೆಸಲಾಗುವುದು ಎಂದು ಕೆನಡಾ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.