ADVERTISEMENT

ಅಫ್ಗಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ: 9 ಸಾವು

ಏಜೆನ್ಸೀಸ್
Published 1 ಅಕ್ಟೋಬರ್ 2020, 6:13 IST
Last Updated 1 ಅಕ್ಟೋಬರ್ 2020, 6:13 IST
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ   

ಕಾಬೂಲ್‌: ಅಫ್ಗಾನಿಸ್ತಾನದ ದಕ್ಷಿಣ ಭಾಗದಲ್ಲಿ ಮಿಲಿಟರಿ ಚೆಕ್‌ ಪಾಯಿಂಟ್‌ ಬಳಿ ನಡೆದ ಆತ್ಮಾಹುತಿ ಕಾರು ಬಾಂಬ್‌ ದಾಳಿಯಲ್ಲಿ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ನಾಲ್ವರು ನಾಗರಿಕರೂ ಸೇರಿದ್ದಾರೆ.

ನಹ್ರಿ ಸಾರಾ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಭದ್ರತಾ ಪಡೆಯ ಮೂವರು ಸಿಬ್ಬಂದಿ ಹಾಗೂ ಮಗು ಗಾಯಗೊಂಡಿದ್ದಾರೆ ಎಂದು ಹೆಲ್ಮಂಡ್‌ ಪ್ರಾಂತ್ಯದ ಗವರ್ನರ್‌ ಅವರ ವಕ್ತಾರ ಒಮರ್‌ ತಿಳಿಸಿದ್ದಾರೆ.

ಚೆಕ್‌ ಪಾಯಿಂಟ್‌ ಬಳಿ ವಾಹನ ಸಾಗುತ್ತಿದ್ದಾಗ ದಾಳಿ ನಡೆದಿದೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ ಎಂದು ಅವರು ಹೇಳಿದ್ದಾರೆ.

ADVERTISEMENT

ದಾಳಿಯ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ. ಆದರೆ ಹೆಲ್ಮಂಡ್‌ ಪ್ರಾಂತ್ಯದ ಬಹುತೇಕ ಭಾಗ ತಾಲಿಬಾನ್‌ ಉಗ್ರರ ನಿಯಂತ್ರಣದಲ್ಲಿದೆ ಎನ್ನಲಾಗಿದೆ.

ಅಫ್ಗನ್‌ ಸರ್ಕಾರದ ಸಂಧಾನಕಾರರು ಮತ್ತು ತಾಲಿಬಾನ್‌ ಸಂಘಟನೆ ನಾಯಕರ ನಡುವೆ ಕತಾರ್‌ನಲ್ಲಿ ಐತಿಹಾಸಿಕ ಮಾತುಕತೆ ನಡೆದಿರುವಾಗಲೇ ಈ ದಾಳಿ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.