
ಸಾವು
(ಪ್ರಾತಿನಿಧಿಕ ಚಿತ್ರ)
ಮೆಡಾನ್: ಇಂಡೊನೇಷ್ಯಾದ ಸುಮಾತ್ರಾ ದ್ವೀಪದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಪ್ರವಾಹ–ಭೂಕುಸಿತ ಸಂಭವಿಸಿದ್ದು, ಕನಿಷ್ಠ 17 ಜನರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ.
ರಸ್ತೆಗೆ ಮಣ್ಣು ಕುಸಿದಿದ್ದು, ಬಂಡೆಗಳು ಉರುಳಿವೆ. ಮರಗಳು ಅಡ್ಡಲಾಗಿ ಬಿದ್ದಿರುವುದರಿಂದ ಸ್ಥಳಕ್ಕೆ ತೆರಳಲು ರಕ್ಷಣಾ ಸಿಬ್ಬಂದಿ ಹರಸಾಹಸ ಮಾಡಬೇಕಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ರಕ್ಷಣಾ ಸಿಬ್ಬಂದಿಯು ಐವರ ಮೃತದೇಹಗಳನ್ನು ಪತ್ತೆಹಚ್ಚಿದ್ದು, ಗಾಯಗೊಂಡಿದ್ದ ಮೂವರನ್ನು ರಕ್ಷಿಸಿದ್ದಾರೆ. ನಾಪತ್ತೆಯಾಗಿರುವ ನಾಲ್ವರಿಗಾಗಿ ಶೋಧ ನಡೆಸಿದ್ದಾರೆ ಎಂದಿದ್ದಾರೆ.
ಪ್ರವಾಹದಿಂದಾಗಿ 2,470 ಮನೆಗಳಿಗೆ ಹಾನಿಯಾಗಿದ್ದು, ಹಲವು ಕಟ್ಟಡಗಳು ಮುಳುಗಿವೆ. ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, 17 ಮನೆಗಳು ನೆಲಸಮವಾಗಿವೆ ಎಂದು ಮೂಲಗಳು ತಿಳಿಸಿವೆ.
ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.