
ಇಮ್ರಾನ್ ಖಾನ್
ಇಸ್ಲಾಮಾಬಾದ್: ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭೇಟಿ ಮಾಡಲು ಮತ್ತು ಅವರ ಆರೋಗ್ಯ ಸ್ಥಿತಿ ಬಗ್ಗೆ ವರದಿ ಸಲ್ಲಿಸಲು ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ವಕೀಲರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಅನುಮತಿ ನೀಡಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ ಮತ್ತು ನ್ಯಾಯಮೂರ್ತಿ ಶಾಹಿದ್ ಬಿಲಾಲ್ ಹಸನ್ ಅವರಿದ್ದ ಪೀಠವು, ಇಮ್ರಾನ್ ಅವರನ್ನು ಭೇಟಿ ಆಗುವಂತೆ ಪಿಟಿಐ ಪಕ್ಷದ ವಕೀಲ ಸಲ್ಮಾನ್ ಸಫ್ದರ್ ಅವರನ್ನು ಅಮಿಕಸ್ ಕ್ಯೂರಿ ಆಗಿ ನೇಮಿಸಿತು.
ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಪಟ್ಟ ಇಮ್ರಾನ್ ಖಾನ್ ಅವರು 2023ರ ಆಗಸ್ಟ್ 5ರಿಂದ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿದ್ದಾರೆ.
‘ನ್ಯಾಯಾಲಯದ ಪರವಾಗಿ ಸಲ್ಮಾನ್ ಸಫ್ದರ್ ಅವರು ಅಡಿಯಾಲಾ ಜೈಲಿಗೆ ಹೋಗಲಿದ್ದಾರೆ. ಅವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಅವರನ್ನು ಜೈಲಿನ ಹೊರಗೆ ಕಾಯಿಸಬಾರದು’ ಎಂದು ಮುಖ್ಯ ನ್ಯಾಯಮೂರ್ತಿ ಅಫ್ರಿದಿ ಅವರು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.