
ಸಾವು (ಪ್ರಾತಿನಿಧಿಕ ಚಿತ್ರ)
ಕ್ರಾನ್ಸ್ –ಮೊಂಟಾನ (ಸ್ವಿಟ್ಜರ್ಲೆಂಡ್): ಇಲ್ಲಿನ ಸ್ವಿಸ್ ಆಲ್ಪ್ಸ್ ರೆಸಾರ್ಟ್ ಪಟ್ಟಣದ ಬಾರ್‌ನಲ್ಲಿ ಹೊಸ ವರ್ಷಾಚರಣೆ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಗುರುತು ಪತ್ತೆ ಹಚ್ಚುವ ಪ್ರಕ್ರಿಯೆಯನ್ನು ತನಿಖಾಧಿಕಾರಿಗಳು ಚುರುಕುಗೊಳಿಸಿದ್ದಾರೆ.
ಬುಧವಾರ ರಾತ್ರಿ ನಡೆದ ದುರಂತದಲ್ಲಿ 40 ಮಂದಿ ಮೃತಪಟ್ಟು, 115 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಆತಂಕ ಇದೆ.
‘ಮೃತರ ಗುರುತು ಪತ್ತೆ ಕಾರ್ಯವನ್ನು ತ್ವರಿತಗೊಳಿಸಿದ್ದೇವೆ. ಕೆಲವು ಮೃತದೇಹಗಳು ಸಂಪೂರ್ಣವಾಗಿ ಸುಟ್ಟುಹೋಗಿರುವ ಕಾರಣ ಗುರುತು ಪತ್ತೆಗೆ ಹೆಚ್ಚಿನ ದಿನಗಳು ಬೇಕಾಗಬಹುದು’ ಎಂದು ಪೊಲೀಸರು ಹೇಳಿದ್ದಾರೆ.
ಬೆಂಕಿ ಅವಘಡ ಸಂಭವಿಸಿದಾಗ ಬಾರ್‌ನಲ್ಲಿ ಒಟ್ಟು ಎಷ್ಟು ಜನರಿದ್ದರು ಮತ್ತು ಎಷ್ಟು ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎಂಬುದರ ಬಗ್ಗೆ ಪೊಲೀಸರು ನಿಖರ ಮಾಹಿತಿ ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.