ಬೀರತ್: ಉತ್ತರ ಸಿರಿಯಾದಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ಶುಕ್ರವಾರ ನಡೆಸಿರುವ ಗುಂಡಿನ ದಾಳಿಯಲ್ಲಿ 10 ಜನರು ಮೃತಪಟ್ಟಿದ್ದಾರೆ.
ಆಡಳಿತ ಸರ್ಕಾರದ ಬೆಂಬಲಿಗರನ್ನು ಗುರಿಯಾಗಿಸಿ ಬಂಡುಕೋರರು ದಾಳಿ ನಡೆಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎಫ್‌ಐ’ ವರದಿ ಮಾಡಿದೆ.
ಎರಡು ವರ್ಷಗಳ ಹಿಂದೆ ಸಿರಿಯಾದಲ್ಲಿ ಕದನ ವಿರಾಮ ಘೋಷಣೆಯಾಗಿತ್ತು. ಆ ನಂತರ, ಇದೇ ಮೊದಲ ಬಾರಿಗೆ ದೇಶದಲ್ಲಿ ಮಾರಣಾಂತಿಕ ದಾಳಿ ನಡೆಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಈ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ, ಹಯಾತ್ ತಹ್ರೀರ್ ಅಲ್-ಶಾಮ್ ಎಂಬ ಬಲಿಷ್ಠ ಬಂಡುಕೋರರ ಸಂಘಟನೆ ಈ ದಾಳಿಯ ಹಿಂದಿರಬಹುದು ಎಂದು ಶಂಕಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.