ADVERTISEMENT

ರಷ್ಯಾ–ಉಕ್ರೇನ್ ಶಾಂತಿಯ ಮೂಲಕ ಬಿಕ್ಕಟ್ಟು ಬಗೆಹರಿಸಿಕೊಳ್ಳಲಿ: ತಾಲಿಬಾನ್ ಆಗ್ರಹ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಫೆಬ್ರುವರಿ 2022, 10:35 IST
Last Updated 28 ಫೆಬ್ರುವರಿ 2022, 10:35 IST
ಅಫ್ಗಾನಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರ ಅಬ್ದುಲ್ ಖಾದರ್ ಬಲ್ಕಿ
ಅಫ್ಗಾನಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರ ಅಬ್ದುಲ್ ಖಾದರ್ ಬಲ್ಕಿ   

ಕಾಬೂಲ್: ರಷ್ಯಾ ಹಾಗೂ ಉಕ್ರೇನ್ ಪರಸ್ಪರ ಕಾದಾಟ ನಡೆಸದೇ ಶಾಂತಿ ಮಾತುಕತೆ ಮೂಲಕ ಬಿಕ್ಕಟ್ಟನ್ನು ಪರಿಹರಿಸಿಕೊಳ್ಳಬೇಕು ಎಂದು ತಾಲಿಬಾನ್ ಹೇಳಿದೆ.

ಈ ಕುರಿತು ಭಾನುವಾರ ಟ್ವೀಟ್ ಮಾಡಿರುವ ಅಫ್ಗಾನಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರ ಅಬ್ದುಲ್ ಖಾದರ್ ಬಲ್ಕಿ, ‘ರಷ್ಯಾದ ಆಕ್ರಮಣದಿಂದ ಉಕ್ರೇನ್‌ನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ದಿ ಇಸ್ಲಾಮಿಕ್ ಎಮಿರೇಟ್ಸ್ ಆಫ್ ಅಫ್ಗಾನಿಸ್ತಾನ ಸೂಕ್ಷ್ಮವಾಗಿ ಗಮನಿಸುತ್ತಿದೆ. ರಷ್ಯಾ ದಾಳಿಯಿಂದ ಅಲ್ಲಿನ ನಾಗರಿಕರ ಬಗ್ಗೆ ಚಿಂತಾಕ್ರಾಂತವಾಗಿದೆ’ ಎಂದಿದ್ದಾರೆ.

‘ರಷ್ಯಾ ಹಾಗೂ ಉಕ್ರೇನ್ ಪರಸ್ಪರ ಶಾಂತಿ ಮಾತುಕತೆಯ ಮೂಲಕ ತಮ್ಮ ನಡುವೆ ಉಂಟಾಗಿರುವ ಬಿಕ್ಕಟ್ಟನ್ನು ಶಾಂತಿ ಮಾತುಕತೆಯ ಮೂಲಕ ಬಗೆಹರಿಸಿಕೊಂಡು ಇಬ್ಬರಿಗೂ ಒಳಿತಾಗುವ ಕ್ರಮವನ್ನು ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

ಇನ್ನೊಂದೆಡೆ ತಾಲಿಬಾನ್‌ನ ಈ ಆಗ್ರಹ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಒಳಗಾಗಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಅಫ್ಗಾನಿಸ್ತಾನದಲ್ಲಿ ಅಮೆರಿಕ ಕಾಲ್ಕಿತ್ತ ನಂತರ ತಾಲಿಬಾನ್ ಏಕಾಏಕಿ ಆಕ್ರಮಣ ಮಾಡಿ ಅಫ್ಗಾನಿಸ್ತಾನವನ್ನು ವಶಪಡಿಸಿಕೊಂಡು ಅಲ್ಲಿ ತನ್ನ ಅಧಿಕಾರ ಸ್ಥಾಪಿಸಿರುವುದನ್ನು ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.