ADVERTISEMENT

ಅಫ್ಗಾನಿಸ್ತಾನದಲ್ಲಿ ಮತ್ತೊಂದು ಬಾಂಬ್‌ ಸ್ಫೋಟ: ತಾಲಿಬಾನ್‌ ಕಮಾಂಡರ್‌ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಅಕ್ಟೋಬರ್ 2021, 9:56 IST
Last Updated 14 ಅಕ್ಟೋಬರ್ 2021, 9:56 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಕಾಬೂಲ್‌: ಅಫ್ಗಾನಿಸ್ತಾನದ ಅಸದಾಬಾದ್‌ನಲ್ಲಿ ಗುರುವಾರ ಬಾಂಬ್‌ ದಾಳಿ ನಡೆದಿದೆ. ಘಟನೆಯಲ್ಲಿ ತಾಲಿಬಾನ್‌ ಕಮಾಂಡರ್‌ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.

ಕುಣಾರ್ ಪ್ರಾಂತ್ಯದ ರಾಜಧಾನಿಯಾದ ಅಸಾದಾಬಾದ್‌ನಲ್ಲಿ ತಾಲಿಬಾನ್ ಪೊಲೀಸ್ ಮುಖ್ಯಸ್ಥರನ್ನು ಹೊತ್ತೊಯ್ಯುತ್ತಿದ್ದ ವಾಹನವನ್ನು ಗುರಿಯಾಗಿಸಿ ಬಾಂಬ್ ಸ್ಫೋಟಿಸಲಾಗಿದೆ. ಘಟನೆಯಲ್ಲಿ ಒಬ್ಬ ತಾಲಿಬಾನ್‌ ಕಮಾಂಡರ್‌ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಾಳಿಯ ಹೊಣೆಯನ್ನು ಈ ವರೆಗೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ, ಪೂರ್ವ ಅಘ್ಗಾನಿಸ್ತಾನದಲ್ಲಿ ಸಕ್ರಿಯವಾಗಿರುವ ಇಸ್ಲಾಮಿಕ್ ಸ್ಟೇಟ್-ಖೊರಾಸನ್ ಉಗ್ರ ಸಂಘಟನೆಯು ಈ ಹಿಂದೆ ಇದೇ ರೀತಿಯ ದಾಳಿಗಳನ್ನು ನಡೆಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.