ಕಾಬೂಲ್: ಆಫ್ಗಾನಿಸ್ತಾನದ ಪಕ್ತಿಕಾ ಪ್ರಾಂತ್ಯದ ಸರೋಜಾಯಿ ಎಂಬಲ್ಲಿ ಕನಿಷ್ಠ 20 ತಾಲಿಬಾನ್ ಉಗ್ರರನ್ನು ಭದ್ರತಾ ಪಡೆಗಳು ಗುರುವಾರ ರಾತ್ರಿ ಹತ್ಯೆ ಮಾಡಿವೆ ಎಂದು ಅಲ್ಲಿನ ರಕ್ಷಣಾ ಸಚಿವಾಲಯ ಹೇಳಿದೆ. ಕಾರ್ಯಾಚರಣೆಯಲ್ಲಿ 12 ಉಗ್ರರು ಗಾಯಗೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದು, ಕೆಲವರಿಗೆ ಗಾಯಗಳಾಗಿವೆ ಎಂದೂ ಸಚಿವಾಲಯ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.