ಮೆಕ್ಸಿಕೊ ನಗರ: ಪಶ್ಚಿಮ ಮೆಕ್ಸಿಕೊದ ಹೆದ್ದಾರಿಯಲ್ಲಿ ಸೋಮವಾರ ಎರಡು ಟ್ಯಾಂಕರ್ ಅಡುಗೆ ಅನಿಲ ಹೊತ್ತೊಯ್ಯುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಪಲ್ಪಿ ಹೊಡೆದು ಸ್ಪೋಟಗೊಂಡ ಪರಿಣಾಮ 13 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟ್ರಕ್ ಚಾಲಕ ಸೇರಿದಂತೆ ವಾಹನದಲ್ಲಿದ್ದ ಇತರೆ 12 ಮಂದಿ ಮೃತಪಟ್ಟಿದ್ದಾರೆ. ಮೃತದೇಹಗಳು ಛಿದ್ರವಾದ ಕಾರಣ, ಗುರುತಿಸಲು ಸಾಧ್ಯವಾಗುತ್ತಿಲ್ಲ. ಮೂರು ವಾಹನಗಳು ಸುಟ್ಟು ಕರಗಲಾಗಿವೆ ಎಂದು ಪ್ರಾಸಿಕ್ಯೂಟರ್ ಕಚೇರಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.