ADVERTISEMENT

ಚೀನಾದಲ್ಲಿ ಅಗ್ನಿ ಅವಘಡ: 10 ಮಂದಿ ಸಾವು

ಪಿಟಿಐ
Published 25 ನವೆಂಬರ್ 2022, 9:45 IST
Last Updated 25 ನವೆಂಬರ್ 2022, 9:45 IST
   

ಬೀಜಿಂಗ್: ವಾಯುವ್ಯ ಚೀನಾದ ಷಿನ್‌ಜಿಯಾಂಗ್ ಪ್ರದೇಶದ ವಸತಿ ಸಮುಚ್ಛಯದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 10 ಮಂದಿ ಮೃತಪಟ್ಟು, 9 ಮಂದಿ ಗಾಯಗೊಂಡಿದ್ದಾರೆ.

ಉರುಮ್ಕಿ ವಲಯದ ಟಿಯಾಂಶನ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಈ ಅವಘಡ ಸಂಭವಿಸಿದೆ. ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸಲಾಗಿದೆ. ತುರ್ತು ಚಿಕಿತ್ಸೆ ಹೊರತಾಗಿಯೂ 10 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಇತರೆ ಒಂಬತ್ತು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಟ್ಟಡದ ಮನೆಯೊಂದರ ಮಲಗುವ ಕೋಣೆಯ ಶಾರ್ಟ್ ಸಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ ಎಂದು ಸಿಜಿಟಿಎನ್ ಟಿವಿ ವರದಿ ಮಾಡಿದೆ.

ADVERTISEMENT

ಈ ವಾರದ ಆರಂಭದಲ್ಲಿ ಕೇಂದ್ರ ಚೀನಾದ ಹೆನನ್ ಪ್ರಾಂತ್ಯದ ಬಟ್ಟೆ ತಯಾರಿಕಾ ಘಟಕದಲ್ಲಿ ಸಂಭವಿಸಿದ್ದ ಬೆಂಕಿ ಆಕಸ್ಮಿಕದಲ್ಲಿ 38 ಮಂದಿ ಸಾವಿಗೀಡಾಗಿದ್ದರು.

ವೆಲ್ಡಿಂಗ್ ಮಾಡುವ ವೇಳೆ ಬೆಂಕಿಯ ಕಿಡಿ ಹತ್ತಿ ಬಟ್ಟೆಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.