
ಪ್ರಜಾವಾಣಿ ವಾರ್ತೆ
ಢಾಕಾ: ಮಾತುಕತೆಗೆ ಬರುವಂತೆ ಪ್ರಧಾನಿ ಶೇಖ್ ಹಸೀನಾ ಅವರು ನೀಡಿದ್ದ ಆಹ್ವಾನವನ್ನು ವಿದ್ಯಾರ್ಥಿ ನಾಯಕರು ತಿರಸ್ಕರಿಸಿದ್ದಾರೆ. ಈ ಬೆನ್ನಲ್ಲೇ ಶನಿವಾರ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ.
ಅಲ್ಲದೇ, ರಾಷ್ಟ್ರವ್ಯಾಪ್ತಿ ಪ್ರತಿಭಟನೆ ಮತ್ತು ಸಂಪೂರ್ಣ ಅಸಹಕಾರ ಚಳವಳಿಗೆ ಕರೆ ನೀಡಿದ್ದಾರೆ.
1971ರ ಬಾಂಗ್ಲಾದೇಶ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದವರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ 30ರಷ್ಟು ಮೀಸಲಾತಿ ನೀಡುವ ವ್ಯವಸ್ಥೆಯನ್ನು ರದ್ದುಮಾಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ 200ಕ್ಕೂ ಹೆಚ್ಚು ಜನರ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.