ADVERTISEMENT

ಭಯೋತ್ಪಾದನೆ ನಿಗ್ರಹಕ್ಕೆ ಕೈಜೋಡಿಸಿ: ಜೈಶಂಕರ್‌

ಪಿಟಿಐ
Published 27 ಸೆಪ್ಟೆಂಬರ್ 2019, 18:56 IST
Last Updated 27 ಸೆಪ್ಟೆಂಬರ್ 2019, 18:56 IST
ಎಸ್‌.ಜೈಶಂಕರ್‌
ಎಸ್‌.ಜೈಶಂಕರ್‌   

ನ್ಯೂಯಾರ್ಕ್‌: ಎಲ್ಲಾ ರೀತಿಯ ಭಯೋತ್ಪಾದನೆಗಳನ್ನು ನಿಗ್ರಹಿಸಲು ದಕ್ಷಿಣ ಏಷ್ಯಾ ರಾಷ್ಟ್ರಗಳು ಪರಸ್ಪರ ಕೈಜೋಡಿಸಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಹೇಳಿದ್ದಾರೆ.

ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘಟನೆಯ (ಸಾರ್ಕ್‌) ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಕೇವಲ ಭಯೋತ್ಪಾದನೆ ನಿಗ್ರಹಕ್ಕೆ ಮಾತ್ರವಲ್ಲ, ಈ ಪ್ರದೇಶದ ಉಳಿವಿಗಾಗಿಯೂ ಪರಸ್ಪರ ಸಹಕಾರ ಅಗತ್ಯ’ ಎಂದಿದ್ದಾರೆ.

‘ಭಯೋತ್ಪಾದನೆಯ ವಿರುದ್ಧ ಕೈಗೊಳ್ಳುವ ಕ್ರಮಗಳಿಂದ ಸಾರ್ಕ್‌ನ ಪ್ರಸ್ತುತತೆ ನಿರ್ಧಾರವಾಗುತ್ತದೆ’ ಎಂದೂ ಅವರು ಹೇಳಿದ್ದಾರೆ.

ADVERTISEMENT

ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರತಿಭಟಿಸಿ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಶಿ ಅವರು ಜೈಶಂಕರ್‌ ಅವರ ಭಾಷಣವನ್ನು ಬಹಿಷ್ಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.