ADVERTISEMENT

ಉಗ್ರರ ಸಂಘಟನೆಗಳಿಗೆ ಆಫ್ಗನ್‌ನಲ್ಲಿ ಬೆಂಬಲ ಬೇಡ: ಭಾರತ ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಜನವರಿ 2022, 10:37 IST
Last Updated 27 ಜನವರಿ 2022, 10:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ವಿಶ್ವಸಂಸ್ಥೆ: ಉಗ್ರರ ಸಂಘಟನೆಗಳಿಗೆ ಅಫ್ಗಾನಿಸ್ತಾನದಲ್ಲಿ ಯಾವುದೇ ರೀತಿಯ ಬೆಂಬಲ ಸಿಗಬಾರದು ಎಂದು ಭಾರತ ಒತ್ತಾಯಿಸಿದೆ.

ಭಯೋತ್ಪಾದನಾ ಚಟುವಟಿಕೆಗಳಿಗೆ ಸುರಕ್ಷಿತ ತಾಣವೆನಿಸಿರುವ ಪ್ರದೇಶಗಳಲ್ಲೂ ಉಗ್ರರ ಸಂಘಟನೆಗಳಿಗೆ ಯಾವುದೇ ನೆರವು ಲಭಿಸದಂತೆ ನೋಡಿಕೊಳ್ಳಬೇಕು ಎಂದು ವಿಶ್ವಸಂಸ್ಥೆಯ ರಾಯಭಾರ ಕಚೇರಿಯ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್‌. ತಿರುಮೂರ್ತಿ ಅವರು ಪಾಕಿಸ್ತಾನದ ಹೆಸರನ್ನು ಹೇಳದೆ ಒತ್ತಾಯಿಸಿದ್ದಾರೆ.

ಭದ್ರತಾ ಮಂಡಳಿಯ ಸಭೆಯಲ್ಲಿ ಮಾತನಾಡಿದ ಅವರು, ಅಫ್ಗಾನಿಸ್ತಾನ ಮತ್ತು ಇತರ ಪ್ರದೇಶಗಳಲ್ಲಿ ಭಯೋತ್ಪಾದನಾ ಚಟುವಟಿಕೆಯು ಗಂಭೀರ ಸವಾಲನ್ನು ಒಡ್ಡಿದೆ ಎಂದು ಹೇಳಿದ್ದಾರೆ. ಉಗ್ರರ ಚಟುವಟಿಕೆಗಳನ್ನು ನಿಗ್ರಹಿಸಲು ಅಂತರರಾಷ್ಟ್ರೀಯ ಸಮುದಾಯ ಒಗ್ಗೂಡಬೇಕು ಎಂದಿರುವ ಮಂಡಳಿಯ ನಿರ್ಣಯವನ್ನೂ ಅವರು ಇದೇ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.