ADVERTISEMENT

Texas Floods: 100ರ ಗಡಿ ದಾಟಿದ ಸಾವಿನ ಸಂಖ್ಯೆ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಜುಲೈ 2025, 6:13 IST
Last Updated 8 ಜುಲೈ 2025, 6:13 IST
<div class="paragraphs"><p>ಟೆಕ್ಸಾಸ್ ಪ್ರವಾಹ</p></div>

ಟೆಕ್ಸಾಸ್ ಪ್ರವಾಹ

   

(ರಾಯಿಟರ್ಸ್ ಚಿತ್ರ)

ಕೆರ್ವಿಲ್ಲೆ (ಟೆಕ್ಸಾಸ್): ಅಮೆರಿಕದ ಟೆಕ್ಸಾಸ್ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಉಂಟಾದ ದಿಢೀರ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 100 ದಾಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಜುಲೈ 4ರಂದು ಸುರಿದ ಮಳೆಯಿಂದಾಗಿ ಭೀಕರ ಪ್ರವಾಹ ಉಂಟಾಗಿತ್ತು. ಹಲವು ಪ್ರದೇಶಗಳಲ್ಲಿ ನಾಪತ್ತೆಯಾದವರ ಪತ್ತೆಯಾಗಿ ರಕ್ಷಣಾ ಕಾರ್ಯಾಚರಣೆ ಈಗಲೂ ಮುಂದುವರಿದಿದೆ.

ಟೆಕ್ಸಾಸ್‌ನ ಹಲವು ಕಡೆಗಳಲ್ಲಿ ಮಳೆಯಾಗುತ್ತಿರುವುದರಿಂದಾಗಿ ಮತ್ತಷ್ಟು ಪ್ರವಾಹ ಭೀತಿ ಎದುರಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ದಶಕದಲ್ಲೇ ಸಂಭವಿಸಿದ ಅತ್ಯಂತ ಭೀಕರ ಪ್ರವಾಹಗಳಲ್ಲಿ ಇದೂ ಒಂದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.