ADVERTISEMENT

ಥಾಯ್ಲೆಂಡ್‌: ಬಸ್ ಅಪಘಾತದಲ್ಲಿ 14 ಮಂದಿ ಸಾವು, ಹಲವರಿಗೆ ಗಾಯ

ರಾಯಿಟರ್ಸ್
Published 5 ಡಿಸೆಂಬರ್ 2023, 7:00 IST
Last Updated 5 ಡಿಸೆಂಬರ್ 2023, 7:00 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬ್ಯಾಂಕಾಕ್‌: ಥಾಯ್ಲೆಂಡ್‌ನ ಪಶ್ಚಿಮ ಪ್ರಾಂತ್ಯದಲ್ಲಿ ಬಸ್‌ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 14 ಮಂದಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಬಸ್‌ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರತೆಗೆಯಲಾಗಿದೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.