ADVERTISEMENT

ಥಾಯ್ಲೆಂಡ್‌ನಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಉರುಳಿದ ಕ್ರೇನ್: 12 ಮಂದಿ ಸಾವು

ರಾಯಿಟರ್ಸ್
Published 14 ಜನವರಿ 2026, 5:42 IST
Last Updated 14 ಜನವರಿ 2026, 5:42 IST
<div class="paragraphs"><p>ರೈಲು ಅಪಘಾತದ ದೃಶ್ಯ</p></div>

ರೈಲು ಅಪಘಾತದ ದೃಶ್ಯ

   

Credit: X/@prdthailand

ಕ್ವಾಲಾಲಂಪುರ: ಥಾಯ್ಲೆಂಡ್‌ ರಾಜಧಾನಿ ಬ್ಯಾಂಕಾಕ್‌ನಿಂದ ಚಲಿಸುತ್ತಿದ್ದ ರೈಲಿನ ಮೇಲೆ ಕ್ರೇನ್ ಉರುಳಿಬಿದ್ದ ಪರಿಣಾಮ ಕನಿಷ್ಠ 12 ಮಂದಿ ಮೃತಪಟ್ಟಿದ್ದು, 30ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಬ್ಯಾಂಕಾಕ್‌ನಿಂದ ಈಶಾನ್ಯಕ್ಕೆ 230 ಕಿ.ಮೀ. ದೂರದಲ್ಲಿರುವ ನಖೋನ್ ರಚ್ಚಾಸಿಮಾ ಪ್ರಾಂತ್ಯದ ಸಿಖಿಯೊ ಜಿಲ್ಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.

ಹೈಸ್ಪೀಡ್ ರೈಲು ಯೋಜನೆ ನಿಮಿತ್ತ ಕೆಲಸ ಮಾಡುತ್ತಿದ್ದ ವೇಳೆ ಕ್ರೇನ್ ದಿಢೀರ್‌ ಆಗಿ ಪಕ್ಕದಲ್ಲಿ ಹಾದುಹೋಗುತ್ತಿದ್ದ ರೈಲಿನ ಮೇಲೆ ಉರುಳಿ ಬಿದ್ದಿದೆ. ಇದಾದ ಕೆಲವೇ ಹೊತ್ತಿನಲ್ಲಿ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು, ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.