ADVERTISEMENT

ತಿರುವನಂತಪುರ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ

ಪಿಟಿಐ
Published 27 ಏಪ್ರಿಲ್ 2025, 14:36 IST
Last Updated 27 ಏಪ್ರಿಲ್ 2025, 14:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತಿರುವನಂತಪುರ: ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನುವಾರ ಮುಂಜಾನೆ ಇ–ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದೆ.

ವಿಮಾನ ನಿಲ್ದಾಣದ ವ್ಯವಸ್ಥಾಪಕರ ಅಧಿಕೃತ ಇ–ಮೇಲ್‌ಗೆ ಬಾಂಬ್‌ ಬೆದರಿಕೆಯ ಇ–ಮೇಲ್‌ ಬಂದಿತ್ತು. ತಕ್ಷಣವೇ ಪೊಲೀಸರು ಹಾಗೂ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಸಿಬ್ಬಂದಿ, ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿದರು. ಬಳಿಕ, ಅದೊಂದು ಹುಸಿ ಬೆದರಿಕೆಯ ಇ–ಮೇಲ್‌ ಎಂಬುದು ದೃಢವಾಯಿತು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ವಿಮಾನ ನಿಲ್ದಾಣದ ‘ಬಾಂಬ್‌ ಬೆದರಿಕೆ ಪರಿಶೀಲನಾ ಸಮಿತಿ’ ಸಹ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಹುಸಿ ಬಾಂಬ್‌ ಬೆದರಿಕೆಯಿಂದ ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ಯಾವುದೇ ತೊಡಕುಂಟಾಗಿಲ್ಲ ಎಂದು ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.