ADVERTISEMENT

ಪಾಕಿಸ್ತಾನ: ಭೂಕಂಪಕ್ಕೆ ಸಿಲುಕಿ ಮೂವರ ಸಾವು

ಪಿಟಿಐ
Published 2 ಏಪ್ರಿಲ್ 2023, 4:16 IST
Last Updated 2 ಏಪ್ರಿಲ್ 2023, 4:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕರಾಚಿ (ಪಿಟಿಐ): ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಶುಕ್ರವಾರ ರಿಕ್ಟರ್‌ ಮಾಪಕದಲ್ಲಿ 3.5 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಮಣ್ಣಿನ ಗೋಡೆ ಕುಸಿದು‌ ಮೂವರು ಮಕ್ಕಳು ಮೃತಪಟ್ಟು, ಐದು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿನ ವಾಯುವ್ಯ ಕ್ವೆಟ್ಟಾ ಪ್ರದೇಶದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಭೂಕಂಪನದಿಂದ ಎರಡು ಮನೆಗಳ ಮಣ್ಣಿನ ಗೋಡೆ ಕುಸಿದಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT