ಸ್ಯಾನ್ಫ್ರಾನ್ಸಿಸ್ಕೊ: ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಸೋಮವಾರ ಪುನಃ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು,ಕಾಳ್ಗಿಚ್ಚಿನ ಜೊತೆಗೆ ಬಿರುಗಾಳಿಯೂ ಸೇರಿದ ಪರಿಣಾಮ, ಬೆಂಕಿಯ ಜ್ವಾಲೆಗಳು ಈಗಾಗಲೇ ಸುಟ್ಟು ಹೋಗಿರುವ ಪ್ರದೇಶಗಳನ್ನು ಆವರಿಸಿವೆ.
ಕಾಳ್ಗಿಚ್ಚಿನಿಂದಾಗಿ ನೂರಾರು ಮನೆಗಳು ನಾಶವಾಗಿದ್ದು,ಸುಮಾರು 70 ಸಾವಿರ ಮಂದಿಯನ್ನು ಸ್ಥಳಾಂತರಿಸಲಾಗಿದೆ.
ಈ ನಡುವೆ ಉತ್ತರ ಕ್ಯಾಲಿಫೋರ್ನಿಯಾದ ಬೇರೆ ಬೇರೆ ಕಡೆಗಳಲ್ಲಿ ಕಂಡುಬಂದ ಕಾಳ್ಗಿಚ್ಚಿಗೆ ಮೂವರು ಮೃತಪಟ್ಟಿದ್ದಾರೆ. ಕೆಲವು ಕಡೆ ಆಸ್ಪತ್ರೆಗಳನ್ನು ಬಂದ್ ಮಾಡಿ, ರೋಗಿಗಳನ್ನು ಸ್ಥಳಾಂತರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.