ಬೀಜಿಂಗ್: ಇಲ್ಲಿನ ಜಿಯಾಟಾಂಗ್ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಬುಧವಾರ ಸ್ಫೋಟ ಸಂಭವಿಸಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ವಿ.ವಿಯ ರಸಾಯನವಿಜ್ಞಾನ ಪ್ರಯೋಗಾಲಯದಲ್ಲಿ ತ್ಯಾಜ್ಯ ನೀರು ಸಂಸ್ಕರಣೆ ಕುರಿತು ಮೂವರು ವಿದ್ಯಾರ್ಥಿಗಳು ಪ್ರಯೋಗ ನಡೆಸುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಪೋಟದ ಪರಿಣಾಮ ಪ್ರಯೋಗಾಲಯದ ಕಟ್ಟಡಕ್ಕೆ ಬೆಂಕಿ ಹಿಡಿದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.