ವಾಷಿಂಗ್ಟನ್: ಎರಡು ವರ್ಷಗಳಿಂದ ಭಾರತದಲ್ಲಿ ಅಮೆರಿಕ ರಾಯಭಾರಿಯಾಗಿ ಯಾರೂ ಕಾರ್ಯ ನಿರ್ವಹಿಸುತ್ತಿಲ್ಲ. ಅಮೆರಿಕ ರಾಯಭಾರಿಯನ್ನು ನೇಮಕ ಮಾಡಲು ಇದು ಸಕಾಲ ಎಂದು ಭಾರತೀಯ ಮೂಲಕ ಅಮೆರಿಕ ಸಂಸದ ರೋ ಖನ್ನಾ ಅವರು ಸೋಮವಾರ ಅಭಿಪ್ರಾಯಪಟ್ಟಿದ್ದಾರೆ.
‘ಚೀನಾದ ದಬ್ಬಾಳಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಅಮೆರಿಕ, ಭಾರತದೊಂದಿಗೆ ಬಲಿಷ್ಠ ರಕ್ಷಣಾ ಮತ್ತು ಕಾರ್ಯತಂತ್ರ ಆಧಾರಿತ ಪಾಲುದಾರಿಕೆ ಹೊಂದುವ ಅಗತ್ಯವಿದೆ ಎಂದು ಖನ್ನಾ ಹೇಳಿದ್ದಾರೆ.
‘ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧ ಮತ್ತು ರಾಷ್ಟ್ರೀಯ ಭದ್ರತೆಬಲಗೊಳಿಸಲು ಭಾರತಕ್ಕೆ ರಾಯಭಾರಿಯನ್ನು ನೇಮಕ ಮಾಡುವುದು ಅತ್ಯಗತ್ಯ’ ಎಂದು ಖನ್ನಾ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.