ADVERTISEMENT

'ಭಾರತದಲ್ಲಿ ಹೂಡಿಕೆಗೆ ವಿಪುಲ ಅವಕಾಶ: ಅಮೆರಿಕ ಕಂಪನಿಗಳ ಸಿಇಒಗಳ ಮೆಚ್ಚುಗೆ'

ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ ಶೃಂಗ್ಲಾ

ಪಿಟಿಐ
Published 24 ಸೆಪ್ಟೆಂಬರ್ 2021, 6:00 IST
Last Updated 24 ಸೆಪ್ಟೆಂಬರ್ 2021, 6:00 IST
ಕ್ವಾಲ್‌ಕಾಂ ಸಿಇಒ ಕ್ರಿಸ್ಟಿಯಾನೊ ಅಮೋನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚಿಸಿದರು –ಪಿಟಿಐ ಚಿತ್ರ
ಕ್ವಾಲ್‌ಕಾಂ ಸಿಇಒ ಕ್ರಿಸ್ಟಿಯಾನೊ ಅಮೋನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚಿಸಿದರು –ಪಿಟಿಐ ಚಿತ್ರ   

ವಾಷಿಂಗ್ಟನ್‌: ‘ಉದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡುವ ಸಲುವಾಗಿ ಭಾರತದಲ್ಲಿ ಕೈಗೊಂಡಿರುವ ಸುಧಾರಣಾ ಕ್ರಮಗಳ ಬಗ್ಗೆ ಅಮೆರಿಕದ ಪ್ರಮುಖ ಕಂಪನಿಗಳ ಸಿಇಒಗಳು, ಉದ್ಯಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರಿಂದ ಭಾರತದಲ್ಲಿ ಹೂಡಿಕೆಗೆ ವಿಪುಲ ಅವಕಾಶಗಳು ಸೃಷ್ಟಿಯಾಗಿವೆ ಎಂದಿದ್ದಾರೆ’ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ ಶೃಂಗ್ಲಾ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಸಿಇಒಗಳು, ಕಂಪನಿಗಳ ಮುಖ್ಯಸ್ಥರಿಂದ ಈ ಅಭಿಪ್ರಾಯ ವ್ಯಕ್ತವಾಯಿತು ಎಂದು ಅವರು ಹೇಳಿದ್ದಾರೆ.

‘ಭಾರತ ಕೈಗೊಂಡಿರುವ ಸುಧಾರಣಾ ಕ್ರಮಗಳಿಂದ ಉಭಯ ದೇಶಗಳ ನಡುವಿನ ಆರ್ಥಿಕ ಬಾಂಧವ್ಯ ಮತ್ತಷ್ಟುಗಟ್ಟಿಗೊಳ್ಳಲಿದ್ದು, ಜನರಿಗೆ ಲಾಭವಾಗಲಿದೆ ಎಂಬ ವಿಶ್ವಾಸವನ್ನು ಸಿಇಒಗಳು, ಉದ್ಯಮಿಗಳು ವ್ಯಕ್ತಪಡಿಸಿದರು’ ಎಂದು ಸಭೆಯ ನಂತರ ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.