ADVERTISEMENT

ಇರಾನ್‌: ರೈಲು ಅಪಘಾತದಲ್ಲಿ ಕನಿಷ್ಠ 17 ಮಂದಿ ಸಾವು

ಏಜೆನ್ಸೀಸ್
Published 8 ಜೂನ್ 2022, 11:06 IST
Last Updated 8 ಜೂನ್ 2022, 11:06 IST
ರೈಲಿನಡಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುತ್ತಿರುವ ರಕ್ಷಣಾ ಪಡೆಗಳ ಸಿಬ್ಬಂದಿ
ರೈಲಿನಡಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುತ್ತಿರುವ ರಕ್ಷಣಾ ಪಡೆಗಳ ಸಿಬ್ಬಂದಿ   

ಟೆಹರಾನ್‌, ಇರಾನ್‌ (ಎಪಿ): ಪೂರ್ವ ಇರಾನ್‌ನ ತಬಾಸ್‌ ನಗರದ ಬಳಿ ಪ್ರಯಾಣಿಕರ ರೈಲೊಂದು ಹಳಿ ತಪ್ಪಿದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದು 50 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಬಾಸ್‌ನ ಗವರ್ನರ್‌ ಅಲಿ ಅಕ್ಬರ್‌ ರಹಿಮಿ ಅವರ ಹೇಳಿಕೆಯನ್ನು ಉಲ್ಲೇಖಿಸಿ,ಸುಮಾರು 350 ಜನರು ಪ್ರಯಾಣಿಸುತ್ತಿದ್ದ ರೈಲಿನ ನಾಲ್ಕು ಬೋಗಿಗಳು ಹಳಿ ತಪ್ಪಿವೆ. ಅಪಘಾತ ಕುರಿತ ವಿವರಗಳು ಇನ್ನೂ ಅಸ್ಪಷ್ಟವಾಗಿವೆ. ರಕ್ಷಣಾ ಕಾರ್ಯಾಚರಣೆ ವೇಳೆ ಸಾವು ನೋವುಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಪಘಾತ ಸ್ಥಳಕ್ಕೆ, ಆಂಬುಲೆನ್ಸ್‌ ಹಾಗೂ ಹೆಲಿಕಾಪ್ಟರ್‌ಗಳೊಡನೆ ಧಾವಿಸಿರುವ ರಕ್ಷಣಾ ಪಡೆಗಳು ರೈಲಿನಡಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ರಕ್ಷಿಸುವಲ್ಲಿ ನಿರತವಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.