ಢಾಕಾ: ಅಲ್ಪಸಂಖ್ಯಾತರ ಮೇಲಿನ ದಾಳಿಯು ವಿದ್ಯಾರ್ಥಿ ಪ್ರತಿಭಟನೆಯ ಮೂಲಭೂತ ಆಶಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿರುವ ‘ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್ ಬಾಂಗ್ಲಾದೇಶ’ ಸಂಸ್ಥೆಯು, ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ದೇಶದ ಆಸ್ತಿಗಳಿಗೆ ಸೂಕ್ತ ಭದ್ರತೆ ಖಾತ್ರಿಪಡಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದೆ.
‘ಮನೆ, ಧಾರ್ಮಿಕ ಸ್ಥಳಗಳು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಸೇರಿದ ಅಂಗಡಿ–ಮುಂಗಟ್ಟುಗಳ ಮೇಲಿನ ದಾಳಿ ಸೇರಿದಂತೆ ಕೋಮು ಸಂಘರ್ಷವನ್ನು ತೀವ್ರವಾಗಿ ಖಂಡಿಸುವುದಾಗಿ ಸಂಸ್ಥೆ ಹೇಳಿದೆ’ ಎಂದು ಢಾಕಾ ಟ್ರಿಬ್ಯುನ್ ಪತ್ರಿಕೆ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.