ಭದ್ರತಾ ಸಿಬ್ಬಂದಿ
ಪಿಟಿಐ ಚಿತ್ರ
ನ್ಯೂಯಾರ್ಕ್/ವಾಷಿಂಗ್ಟನ್: ಭಾರತದ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಹಿಂದೆ ಇದ್ದ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್– ಎ –ತಯಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಘಟಕ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್)ಅನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಅಮೆರಿಕ ಹೆಸರಿಸಿದೆ.
ಅಮೆರಿಕದ ವಿದೇಶಾಂಗ ಇಲಾಖೆ ಗುರುವಾರ ಹೇಳಿಕೆ ಬಿಡುಗಡೆ ಮಾಡಿದ್ದು, ಈ ಕ್ರಮವು, ಪಹಲ್ಗಾಮ್ ದಾಳಿಗೆ ನ್ಯಾಯ ಒದಗಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಡಿದ್ದ ಭರವಸೆಯನ್ನು ಈಡೇರಿಸುವ ಮತ್ತು ಅಮೆರಿಕದ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಜತೆಗೆ ನಮ್ಮ ರಾಷ್ಟ್ರೀಯ ಭದ್ರತಾ ಹಿತಾಸಕ್ತಿಯನ್ನು ರಕ್ಷಿಸಲು, ಭಯೋತ್ಪಾದನೆಯನ್ನು ಎದುರಿಸಲು ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಹೇಳಿದ್ದಾರೆ.
ಏಪ್ರಿಲ್ 22ರಂದು ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ದಾಳಿಯ ಹೊಣೆಯನ್ನು ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಹೊತ್ತುಕೊಂಡಿತ್ತು, ಆದರೆ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ಹಿಂದೆ ಸರಿದಿತ್ತು.
ಈ ಮಧ್ಯೆ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯು ಟಿಆರ್‌ಎಫ್ ಮುಖ್ಯಸ್ಥ ಶೇಖ್ ಸಜ್ಜದ್ ಗುಲ್ ಅವರನ್ನು ದಾಳಿಯ ಮಾಸ್ಟರ್ ಮೈಂಡ್ ಎಂದು ಗುರುತಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.