ADVERTISEMENT

ತಾಲಿಬಾನ್‌ ಮುಖಂಡರನ್ನು ಭೇಟಿ ಮಾಡಲಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2020, 20:42 IST
Last Updated 1 ಮಾರ್ಚ್ 2020, 20:42 IST
ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌
ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌   

ವಾಷಿಂಗ್ಟನ್: ತಾಲಿಬಾನ್ ಜೊತೆ ಅಮೆರಿಕಾ ಒಪ್ಪಂದ ಮಾಡಿಕೊಂಡಿದ್ದನ್ನು ಡೊನಾಲ್ಡ್‌ ಟ್ರಂಪ್‌ ಸಮರ್ಥಿಸಿಕೊಂಡಿದ್ದಾರೆ.

ಮುಂದಿನ ದಿನಗಳಲ್ಲಿ ವೈಯಕ್ತಿಕವಾಗಿ ತಾಲಿಬಾನ್‌ ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಶ್ವೇತಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಫ್ಗಾನಿಸ್ತಾನದಲ್ಲಿ ಸ್ಥಿರತೆ ಕಾಪಾಡಲು ಎಲ್ಲರೂ ಸಹಕರಿಸಬೇಕು. ಆಫ್ಗಾನಿಸ್ತಾನದಲ್ಲಿರುವ ವಿದೇಶಿ ಸೈನಿಕರನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವ ಹಾದಿಯನ್ನು ಈ ಒಪ್ಪಂದ ಸುಗಮಗೊಳಿಸಲಿದೆ’ಎಂದು ಟ್ರಂಪ್‌ ಪ್ರತಿಪಾದಿಸಿದ್ದಾರೆ.

ADVERTISEMENT

ಈ ಒಪ್ಪಂದದ ಮೂಲಕ 18 ವರ್ಷಗಳ ಸುದೀರ್ಘಯುದ್ಧವನ್ನು ಕೊನೆಗೊಳಿಸಲು ತೀರ್ಮಾನಿಸಲಾಗಿದೆ ಎಂದಿರುವ ಟ್ರಂಪ್‌, ‘ಮುಂದಿನ ದಿನಗಳಲ್ಲಿ ತಾಲಿಬಾನ್ ಮುಖಂಡರೊಂದಿಗಿನ ಮಾತುಕತೆ ಹೆಚ್ಚು ಜಟಿಲವಾಗಲಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಎಲ್ಲರೂ ಯುದ್ಧದಿಂದ ಬೇಸತ್ತಿದ್ದಾರೆ. ಆ ಕಾರಣಕ್ಕಾಗಿ ಮಾತುಕತೆಗಳು ಯಶಸ್ವಿಯಾಗಲಿವೆ'ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.